
ಬೆಂಗಳೂರು: ಲಷ್ಕರ್ ಎ ತೊಯ್ಬಾ ಸಂಘಟನೆಯ ಜತೆಗೆ ಸೇರಿ ಕಾರಾಗೃಹದಲ್ಲಿನ ಸಹ ಕೈದಿಗಳನ್ನು ಭಯೋತ್ಪಾದಕ ಕೃತ್ಯಗಳತ್ತ ಪ್ರೇರೇಪಿಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ₹5 ಲಕ್ಷ ನಗದು ಬಹುಮಾನ ಘೋಷಿಸಿದೆ.
ಜುನೈದ್ ಅಹಮದ್ (33) ಪತ್ತೆಗಾಗಿ ನಗದು ಬಹುಮಾನ ಎನ್ಐಎ ಘೋಷಿಸಿದೆ. ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಶಂಕೆ ಇದೆ. ಆತನ ಪತ್ತೆಗೆ ಎನ್‌ಐಎ ಶೋಧ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಪೂರಕ ದೋಷಾರೋಪಣೆಯನ್ನು ಇತ್ತೀಚೆಗೆ ಎನ್‌ಐಎ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ಜುನೈದ್ ಅಹಮದ್ ಅವರ ತಾಯಿ ಅನೀಸ್ ಫಾತಿಮಾ, ಎಎಸ್ಐ ಚಾನ್ ಪಾಷಾ ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವೈದ್ಯರಾಗಿದ್ದ ಎಸ್.ನಾಗರಾಜ್ ವಿರುದ್ಧ ಐಪಿಸಿ, ಯುಎ(ಪಿ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ, ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಕರ್ನಾಟಕ ಕಾರಾಗೃಹ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿಗಳು ಎಂದು ಎನ್‌ಐಎ ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.