ADVERTISEMENT

ಎನ್‌ಐಎ ಪ್ರಕರಣ: ವಿಚಾರಣೆ ಬಾಕಿ ಬಗ್ಗೆ ವಿವರ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 18:27 IST
Last Updated 1 ಫೆಬ್ರುವರಿ 2021, 18:27 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ(ಯುಎಪಿ) ದಾಖಲಾಗಿರುವ ಪ್ರಕರಣಗಳ ವಿಚಾರಣೆ ಯಾವ ಹಂತದಲ್ಲಿ ಇವೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ದಾಖಲಿಸುವ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ತೆರೆಯುವಂತೆ ಕೋರಿ ಜಯನಗರ ನಿವಾಸಿ ವಸೀಮುದ್ದೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಯುಎಪಿ ಕಾಯ್ದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿದೆ. ಬಹುತೇಕ ಆರೋಪಿಗಳು ದೇಶದ ವಿವಿಧ ಭಾಗದವರಾಗಿದ್ದಾರೆ. ವಿಚಾರಣೆ ವಿಳಂಬವಾಗುತ್ತಿರುವ ಕಾರಣ ಆರೋಪಿಗಳು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಸಾಧ್ಯವಾಗದೆ ಮಾನಸಿಕವಾಗಿ ಬಳಲುತ್ತಿದ್ದಾರೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.