ADVERTISEMENT

ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಪ್ರಜೆ ಬಂಧನ

​ಪ್ರಜಾವಾಣಿ ವಾರ್ತೆ
Published 31 ಮೇ 2022, 20:34 IST
Last Updated 31 ಮೇ 2022, 20:34 IST

ಬೆಂಗಳೂರು: ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆ ಒಕೊಯ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ವ್ಯವಹಾರ ವೀಸಾದಡಿ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ₹ 8 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ ಮಾತ್ರೆಗಳು, 6 ಗ್ರಾಂ ಕೊಕೇನ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಮುಂಬೈನಲ್ಲಿ ನೆಲೆಸಿರುವ ಆಫ್ರಿಕಾ ಪ್ರಜೆ ಜೊತೆ ಒಡನಾಟ ಹೊಂದಿರುವ ಆರೋಪಿ, ಆತನಿಂದಲೇ ನಗರಕ್ಕೆ ಡ್ರಗ್ಸ್ ತರಿಸುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಉದ್ಯಮಿಗಳು ಹಾಗೂ ಇತರರಿಗೆ ಡ್ರಗ್ಸ್ ಮಾರುತ್ತಿದ್ದ. ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.