ಬೆಂಗಳೂರು: ಹತ್ತು ವರ್ಷಗಳಿಂದ ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾದ ಚಿಕ್ವುಮಾ ಬಂತ ಎಂಬಾತನನ್ನು ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ಬಂಧಿಸಿದ್ದಾರೆ.
ಆರೋಪಿಯಿಂದ ₹1.2 ಕೋಟಿ ವೌಲ್ಯದ 600 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಆವಲಹಳ್ಳಿಯ ಬಾಡಿಗೆ ಮನೆಯಲ್ಲಿ ನೆಲಸಿದ್ದ ಎಂದು ಪೊಲೀಸರು ತಿಳಿಸಿದರು.
ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಬೆಂಗಳೂರಿಗೆ ತಂದು ಕಾಲೇಜು ವಿದ್ಯಾರ್ಥಿಗಳು, ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.