ADVERTISEMENT

ರಾತ್ರಿ ಕರ್ಫ್ಯೂ; 61 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 21:31 IST
Last Updated 11 ಏಪ್ರಿಲ್ 2021, 21:31 IST

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ನಗರದಲ್ಲಿ ಶನಿವಾರ ರಾತ್ರಿ ಜಾರಿ ಮಾಡಿದ್ದ ಕರ್ಫ್ಯೂ ವೇಳೆ 61 ವಾಹನಗಳನ್ನು ಆಗ್ನೇಯ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ.

’ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಇದೇ ಸಂದರ್ಭದಲ್ಲಿ ಕೆಲವರು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುತ್ತಿದ್ದರು. ಅಂಥವರನ್ನು ತಡೆದು ವಾಹನ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘55 ದ್ವಿಚಕ್ರ ವಾಹನ, 5 ಕಾರುಗಳು ಹಾಗೂ ಆಟೊ ಜಪ್ತಿ ಮಾಡಲಾಗಿದೆ. ಮಾಲೀ
ಕರಿಗೆ ಎಚ್ಚರಿಕೆ ನೀಡಲಾಗಿದೆ’ ಎಂದರು.

ADVERTISEMENT

ಏಪ್ರಿಲ್ 20ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಪ್ರತಿಯೊಂದು ರಸ್ತೆಯಲ್ಲೂ ಬ್ಯಾರಿಕೇಡ್‌ಗಳನ್ನು ನಿಲ್ಲಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.