ADVERTISEMENT

ನಿಮ್ಹಾನ್ಸ್‌ಗೆ ‘ನೆಲ್ಸನ್ ಮಂಡೇಲಾ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 16:22 IST
Last Updated 9 ಫೆಬ್ರುವರಿ 2024, 16:22 IST
ನಿಮ್ಹಾನ್ಸ್
ನಿಮ್ಹಾನ್ಸ್   

ಬೆಂಗಳೂರು: ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) ವಿಶ್ವ ಆರೋಗ್ಯ ಸಂಸ್ಥೆ ನೀಡುವ ‘ನೆಲ್ಸನ್ ಮಂಡೇಲಾ ಪ್ರಶಸ್ತಿ’ಗೆ ಭಾಜನವಾಗಿದೆ. 

ವಿಶ್ವ ಆರೋಗ್ಯ ಸಂಸ್ಥೆಯು 2019ರಿಂದ ಈ ಪ್ರಶಸ್ತಿ ನೀಡುತ್ತಿದೆ. ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ನಿಮ್ಹಾನ್ಸ್‌ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಂಸ್ಥೆಯು ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಜತೆಗೆ ಸಂಶೋಧನೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದೆ. 

‘ಪ್ರತಿಷ್ಠಿತ ಪ್ರಶಸ್ತಿ ಸ್ವೀಕರಿಸಲು ಹೆಮ್ಮೆಪಡುತ್ತೇವೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ನಮ್ಮ ಧ್ಯೇಯವನ್ನು ಮುಂದುವರಿಸುತ್ತೇವೆ’ ಎಂದು ಸಂಸ್ಥೆ ನಿರ್ದೇಶಕಿ ಡಾ. ಪ್ರತಿಮಾಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.