ADVERTISEMENT

ನಿಮ್ಹಾನ್ಸ್‌: ನಿರ್ದೇಶಕರಾಗಿ ಪದ್ಮಾ ಶ್ರೀವಾಸ್ತವ ನೇಮಕ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 18:17 IST
Last Updated 25 ಡಿಸೆಂಬರ್ 2020, 18:17 IST
ಪ್ರೊ.ಎಂ.ವಿ. ಪದ್ಮಾ ಶ್ರೀವಾತ್ಸವ
ಪ್ರೊ.ಎಂ.ವಿ. ಪದ್ಮಾ ಶ್ರೀವಾತ್ಸವ   

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕರನ್ನಾಗಿ ಪ್ರೊ.ಎಂ.ವಿ. ಪದ್ಮಾ ಶ್ರೀವಾಸ್ತವ ಅವರನ್ನು ಕೇಂದ್ರ ಆರೋಗ್ಯ ಸಚಿವಾಲಯ ನೇಮಕ ಮಾಡಿದೆ.

ಅವರು ದೆಹಲಿಯ ಏಮ್ಸ್‌ನಲ್ಲಿ (ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನರವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮುಂದಿನ ಐದು ವರ್ಷದ ಅವಧಿಗೆ ಅವರನ್ನು ನೇಮಕ ಮಾಡಲಾಗಿದೆ. ದೆಹಲಿಯವರಾದ ಅವರು 200ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದು, 2016ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಪಡೆದಿದ್ದಾರೆ.

2016ರಿಂದ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ.ಬಿ.ಎನ್. ಗಂಗಾಧರ್ ಅವರು ಅ.4ರಂದು ನಿವೃತ್ತರಾಗಿದ್ದರು. ಸಂಸ್ಥೆಯ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಜಿ. ಗುರುರಾಜ್ ಅವರನ್ನು ಮೂರು ತಿಂಗಳ ಅವಧಿಗೆ ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.