ADVERTISEMENT

ನಿಮ್ಹಾನ್ಸ್: ವಸ್ತು ಪ್ರದರ್ಶನ ಮಾರ್ಚ್‌ 3–4ಕ್ಕೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 20:43 IST
Last Updated 26 ಫೆಬ್ರುವರಿ 2026, 20:43 IST
<div class="paragraphs"><p>ನಿಮ್ಹಾನ್ಸ್</p></div>

ನಿಮ್ಹಾನ್ಸ್

   

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ರಾಷ್ಟ್ರೀಯ ವಿಜ್ಞಾನದ ದಿನದ ಅಂಗವಾಗಿ ಮಾರ್ಚ್‌ 3 ಮತ್ತು 4 ರಂದು ನಿಮ್ಹಾನ್ಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ಎರಡು ದಿನಗಳ ವಸ್ತು ಪ್ರದರ್ಶನ ಹಮ್ಮಿಕೊಂಡಿದೆ. 

ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಈ ಪ್ರದರ್ಶನ ನಡೆಯಲಿದೆ. ಸಂವಾದ, ಮಾದರಿಗಳ ಪ್ರಾತ್ಯಕ್ಷಿಕೆ, ರಸಪ್ರಶ್ನೆ ಸ್ಪರ್ಧೆ, ಮನಸ್ಸಿನ ಆಟ ಸೇರಿ ವಿವಿಧ ಚಟುವಟಿಕೆಗಳನ್ನು ಈ ಪ‍್ರದರ್ಶನ ಒಳಗೊಳ್ಳಲಿದೆ. ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವೈದ್ಯರು, ವಿಜ್ಞಾನಿಗಳು, ಸಂಶೋಧಕರು, ವೈದ್ಯಕೀಯ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ADVERTISEMENT

ಮನೋವೈದ್ಯಕ್ಷೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳೆವಣಿಗೆಗಳನ್ನು ತಿಳಿಯಲು ಇದು ಉತ್ತಮ ಅವಕಾಶವಾಗಿದೆ. ಮಾನವನ ನೈಜ ಮಿದುಳು ಸ್ಪರ್ಶಿಸಬಹುದಾಗಿದೆ. ಪ್ರವೇಶ ಉಚಿತ ಇರಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.