ADVERTISEMENT

ಕ್ರಿಕೆಟ್ ಬೆಟ್ಟಿಂಗ್: ₹ 9.50 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 30 ಮೇ 2022, 17:01 IST
Last Updated 30 ಮೇ 2022, 17:01 IST

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 9.50 ಲಕ್ಷ ಜಪ್ತಿ ಮಾಡಿದ್ದಾರೆ.

‘ಇಂದಿರಾನಗರ ಠಾಣೆ ವ್ಯಾಪ್ತಿಯ ಎಚ್‌ಎಎಲ್‌ 2ನೇ ಹಂತದ 12ನೇ ಮುಖ್ಯರಸ್ತೆಯಲ್ಲಿ ಸುತ್ತಾಡುತ್ತಿದ್ದ ಆರೋಪಿ, ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪಂದ್ಯದ ಮೇಲೆ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ದಾಳಿ ಮಾಡಿ ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT