ನಮ್ಮ ಮೆಟ್ರೊ
ನವದೆಹಲಿ: ಬೆಂಗಳೂರಿನ ನಮ್ಮ ಮೆಟ್ರೊವನ್ನು ಕೋಲಾರ ಜಿಲ್ಲೆಯ ಮಾಲೂರಿನ ತನಕ ವಿಸ್ತರಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವಾಲಯ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕೋಲಾರ ಸಂಸದ ಎಂ. ಮಲ್ಲೇಶಬಾಬು ಬುಧವಾರ ಕೇಳಿದ ಪ್ರಶ್ನೆಗೆ ಇಲಾಖೆಯ ರಾಜ್ಯ ಸಚಿವ ತೋಖಾನ್ ಸಾಹು ಉತ್ತರ ನೀಡಿ, ʼಯೋಜನೆಯ ಪ್ರಸ್ತಾವ ರೂಪಿಸುವ ಹೊಣೆ ರಾಜ್ಯ ಸರ್ಕಾರದ್ದು. ರಾಜ್ಯದಿಂದ ಪ್ರಸ್ತಾವ ಬಂದ ಸಂದರ್ಭದಲ್ಲಿ ಕೇಂದ್ರದಿಂದ ಹಣಕಾಸಿನ ನೆರವು ನೀಡಲಾಗುತ್ತದೆʼ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.