ADVERTISEMENT

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವುದಿಲ್ಲ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 16:31 IST
Last Updated 15 ಫೆಬ್ರುವರಿ 2026, 16:31 IST
<div class="paragraphs"><p>ಕಾರ್ಯಕ್ರಮದಲ್ಲಿ (ಎಡದಿಂದ) ಜಾನಪದ ವಿದ್ವಾಂಸ ರವಿ ಯು.ಎಂ., ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಮೋತಿಲಾಲ್ ಚವ್ಹಾಣ್, ಕೆಪಿಸಿಸಿ ಕಾನೂನು ಘಟಕದ ಕಾರ್ಯಾಧ್ಯಕ್ಷ ಅನಂತ ನಾಯಕ್ ಮತ್ತು ಶಿವರಾಜ ಎಸ್. ತಂಗಡಗಿ ಅವರು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು</p></div>

ಕಾರ್ಯಕ್ರಮದಲ್ಲಿ (ಎಡದಿಂದ) ಜಾನಪದ ವಿದ್ವಾಂಸ ರವಿ ಯು.ಎಂ., ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಮೋತಿಲಾಲ್ ಚವ್ಹಾಣ್, ಕೆಪಿಸಿಸಿ ಕಾನೂನು ಘಟಕದ ಕಾರ್ಯಾಧ್ಯಕ್ಷ ಅನಂತ ನಾಯಕ್ ಮತ್ತು ಶಿವರಾಜ ಎಸ್. ತಂಗಡಗಿ ಅವರು ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು

   

    ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು. 

ADVERTISEMENT

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ‌ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರ ಕಾಳಜಿ ಇದೆ. ಆದ್ದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ. ಈ ಬಗ್ಗೆ ಯಾರೂ ಹೆದರುವ ಅಗತ್ಯವಿಲ್ಲ’ ಎಂದು ಭರವಸೆ ನೀಡಿದರು. 

‘ರಾಜ್ಯದಲ್ಲಿ ಇರುವ ಪ್ರತಿಯೊಂದು ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಹತ್ತಾರು ವರ್ಷಗಳಿಂದ ತಾಂಡಾದಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ’ ಎಂದರು.

‘ಸಾಧು- ಸಂತರ‌ ಸಾಲಿನಲ್ಲಿ‌ ಸೇವಾಲಾಲ್ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅಂದಿನ‌ ಕಾಲದಲ್ಲೇ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸೇವಾಲಾಲ್‌ ಅವರು, ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸುತ್ತಾ, ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿ ಮಾತುಗಳನ್ನು ಹೇಳಿದ್ದರು’ ಎಂದು ಸ್ಮರಿಸಿದರು.  

ಬಂಜಾರ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಈ‌ ಹಿಂದೆ ಎರಡು ಬಾರಿ ಮಾಡಲಾಗಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈಗ ಮತ್ತೊಮ್ಮೆ ಶಿಫಾರಸು ಮಾಡಲಾಗುವುದು
– ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.