ADVERTISEMENT

ಟ್ರ್ಯಾಕ್ಟರ್ ಮೂಲಕ ರ‍್ಯಾಲಿ ನಡೆಸಲು ಅವಕಾಶವಿಲ್ಲ: ಬೆಂಗಳೂರು ನಗರ ಕಮಿಷನರ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 2:51 IST
Last Updated 1 ಫೆಬ್ರುವರಿ 2021, 2:51 IST
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್   

ಬೆಂಗಳೂರು: ರೈತ ಸಂಘಟನೆ ಹಾಗೂ ಇತರೆ ಸಂಘಟನೆಗಳು ಮಂಗಳವಾರ (ಜ. 26) ಕರೆ ನೀಡಿರುವ ಟ್ರ್ಯಾಕ್ಟರ್ ರ‌್ಯಾಲಿಗೆ ಅವಕಾಶ ನೀಡಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಗಣರಾಜ್ಯೋತ್ಸವ ಭದ್ರತೆ ಸಂಬಂಧ ಅಧಿಕಾರಿಗಳ ಸಭೆ ನಡೆಸಲಾಯಿತು. ಇದೇ ವೇಳೆಯೇ ಟ್ರ್ಯಾಕ್ಟರ್‌ ರ್ಯಾಲಿ ಬಗ್ಗೆಯೂ ಚರ್ಚೆ ಆಯಿತು' ಎಂದರು.

'ಗಣರಾಜ್ಯೋತ್ಸವ ಆಚರಣೆ ಶಾಂತಿಯುತವಾಗಿ ನಡೆಸಲು ನಗರದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಸೋಮವಾರ ಸಂಜೆಯಿಂದಲೇ ನಗರದಲ್ಲಿ ಬಿಗಿ ಭದ್ರತೆ ಇರಲಿದೆ' ಎಂದೂ ಹೇಳಿದರು.

ADVERTISEMENT

'ನಗರದಲ್ಲಿ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ ನೀಡಲಾಗುವುದು. ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆಗೆ ಬಂದರೆ, ಅಂಥ ಪ್ರತಿಭಟನಾಕಾರರನ್ನು ನಗರದ ಒಳಗೆ ಬಿಡುವುದಿಲ್ಲ' ಎಂದೂ ತಿಳಿಸಿದರು.
'ನಗರದಲ್ಲಿ ಹಿಂದೆ ಎಂದೂ ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆ‌ ನಡೆದಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಕೆಲವರು ಅನುಮತಿ ಕೋರಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ' ಎಂದೂ ಕಮಲ್ ಪಂತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.