ಬೆಂಗಳೂರು: ‘ನಗರ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿ ಹಾಗೂ ಪಾದಯಾತ್ರೆಗೆ ಅವಕಾಶ ಇಲ್ಲ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಸ್ಪಷ್ಟಪಡಿಸಿದರು.
ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಗೆ ಆಗ್ರಹಿಸಿ ಬಿಜೆಪಿ–ಜೆಡಿಎಸ್ ಜಂಟಿಯಾಗಿ ಶನಿವಾರ ಮೈಸೂರಿಗೆ ಪಾದಯಾತ್ರೆ ಆಯೋಜಿಸಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾದಯಾತ್ರೆಗೆ ನನ್ನ ಮಟ್ಟದಲ್ಲಿ ಇದುವರೆಗೂ ಯಾರೂ ಅನುಮತಿ ಕೇಳಿಲ್ಲ. ಅನುಮತಿ ಕೇಳಿದರೂ ಹೈಕೋರ್ಟ್ ಆದೇಶದಂತೆ ನಗರ ವ್ಯಾಪ್ತಿಯಲ್ಲಿ ಪಾದಯಾತ್ರೆಗೆ ಅವಕಾಶ ಇರುವುದಿಲ್ಲ’ ಎಂದು ಹೇಳಿದರು.
‘ಆದರೂ ಪೊಲೀಸ್ ಇಲಾಖೆ ಪೂರಕವಾಗಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.