ADVERTISEMENT

ನಿವೃತ್ತ ಸಿಬ್ಬಂದಿ ಚಿಕಿತ್ಸೆಗೆ ಹಣದ ಕೊರತೆ ಇಲ್ಲ: ಪ್ರವೀಣ್ ಸೂದ್

ಅಸಾಧಾರಣ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 18:58 IST
Last Updated 12 ನವೆಂಬರ್ 2022, 18:58 IST
ಪೊಲೀಸ್‌ ಇಲಾಖೆಯಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಜೀನಾ ಪಿಂಟೊ, ಅರ್ಚನಾ, ಸಂಗೀತಾ, ಶಿವಕುಮಾರ್ ರಾಥೋಡ್, ಎಂ. ನಾಗರಾಜ್ ಅವರನ್ನು ರಾಜ್ಯ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಪೊಲೀಸ್‌ ಇಲಾಖೆಯಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಜೀನಾ ಪಿಂಟೊ, ಅರ್ಚನಾ, ಸಂಗೀತಾ, ಶಿವಕುಮಾರ್ ರಾಥೋಡ್, ಎಂ. ನಾಗರಾಜ್ ಅವರನ್ನು ರಾಜ್ಯ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.   

ಬೆಂಗಳೂರು: ‘ನಿವೃತ್ತ ಪೊಲೀಸ್‌ ಸಿಬ್ಬಂದಿಯ ಚಿಕಿತ್ಸೆಗೆ ಹಣದ ಕೊರತೆ ಇಲ್ಲ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಹೇಳಿದರು.

ರಾಜ್ಯ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕಾಡುಮಲ್ಲೇಶ್ವರ ಗೆಳೆಯರ ಬಳಗ ನಗರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾನವೀಯ ಹಾಗೂ ಅಸಾಧಾರಣ ಸೇವೆ ಸಲ್ಲಿಸಿದ ಪೊಲೀಸ್ ಸಿಬ್ಬಂದಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಆರೋಗ್ಯ ನಿಧಿಯನ್ನು ₹25 ಕೋಟಿಗೆ ಹೆಚ್ಚಳ ಮಾಡಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯನ್ನೂ ಸಹ ಜೋಡಿಸಲಾಗಿದೆ. ಭವಿಷ್ಯದ ದಿನಗಳಲ್ಲಿ ಆರೋಗ್ಯ ರಕ್ಷಣೆಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದರು.

ADVERTISEMENT

ನಗರದ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಅವರು ಮಾತನಾಡಿ, ಪೊಲೀಸರು ಸದಾ ಕಾಲ ಕರ್ತವ್ಯ ಪ್ರಜ್ಞೆಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.

ಅಸಾಧಾರಣ ಸೇವೆ ಸಲ್ಲಿಸಿದ ಜೀನಾ ಪಿಂಟೊ, ಶಿವಕುಮಾರ್ ರಾಥೋಡ್, ಬೆಂಗಳೂರು ಸಿಟಿ ರೈಲ್ವೆ ಪೊಲೀಸ್‌ ಠಾಣೆಯ ಎಂ.ನಾಗರಾಜ್ ಹಾಗೂ ಇತರರನ್ನು ಸನ್ಮಾನಿಸಲಾಯಿತು.

ಹೆಚ್ಚುವರಿ ಪೋಲಿಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್, ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ವೇಮಗಲ್ ನಾರಾಯಣಸ್ವಾಮಿ ಅವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.