ADVERTISEMENT

ನೀರಿನ ಕೊರತೆ ಇಲ್ಲ: ಬೈರತಿ ಬಸವರಾಜ್‌

ಪೌರಕಾರ್ಮಿಕರಿಗೆ 4,300 ಮನೆ–ಬೈರತಿ ಬಸವರಾಜ್‌

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 20:13 IST
Last Updated 25 ಫೆಬ್ರುವರಿ 2020, 20:13 IST
ಬೈರತಿ ಬಸವರಾಜ್‌
ಬೈರತಿ ಬಸವರಾಜ್‌   

ಬೆಂಗಳೂರು:ನಗಾರಾಭಿವೃದ್ದಿ ಇಲಾಖೆಯಿಂದ ಪೌರ ಕಾರ್ಮಿಕರಿಗೆ 4,300 ಮನೆ ನಿರ್ಮಾಣಕ್ಕೆ ತಯಾರಿ ನಡೆದಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಹೇಳಿದರು.

ಮಂಗಳವಾರ ಇಲ್ಲಿ 10ಮಹಾನಗರ ಪಾಲಿಕೆಗಳ ಆಯುಕ್ತರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ರಾಜ್ಯದ ಯಾವುದೇ ಮಹಾನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಎದುರಾಗದು, ನದಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತದೆ.ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಪಾಲಿಕೆ ವ್ಯಾಪ್ತಿಸಹಿತ ಉಳಿದೆಡೆ ಪ್ರತಿದಿನ ನೀರು ಪೂರೈಸುವ ವಿಚಾರ ಇದೆ’ ಎಂದರು.

‘ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಲು ಸೂಚಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.