ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿದೇಶದಿಂದ ಪ್ರಜ್ವಲ್ ರೇವಣ್ಣ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಪ್ರಜ್ವಲ್ ಅವರ ವಿಡಿಯೋ ಸಂದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಮಾತನಾಡುತ್ತಾರೆ ಎಂದು ನಾನು ಮಾತನಾಡಲು ಆಗುವುದಿಲ್ಲ. ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ಬೇರೆ ದಾರಿಯಿಲ್ಲ. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ’ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಆಧರಿಸಿ ರಾಹುಲ್ ಗಾಂಧಿ ಅವರು ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿಚಾರ ಪ್ರಸ್ತಾಪ ಮಾಡಿರುವ ಪ್ರಜ್ವಲ್ ಗೆ ಕಾಲವೇ ಉತ್ತರ ಕೊಡಲಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.