(ಕಡತ ಚಿತ್ರ)
ಬೆಂಗಳೂರು: ರಾಜ್ಯದಲ್ಲಿ 21 ಮೀಟರ್‌ಗಿಂತಲೂ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಒಸಿ) ಪಡೆಯುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಷ್ಟ್ರೀಯ ಕಟ್ಟಡ ನಿಯಮಾವಳಿ ಪ್ರಕಾರ ಎತ್ತರದ ಕಟ್ಟಡಗಳು ಎನ್‌ಒಸಿ ಹೊಂದುವುದು ಕಡ್ಡಾಯ. ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಅಗ್ನಿ ಅವಘಡಕ್ಕೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಕಾರಣ. ಹಾಗಾಗಿ, ರಾಜ್ಯದಲ್ಲಿ 21 ಮೀಟರ್‌ಗಿಂತ ಎತ್ತರದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಆಸ್ಪತ್ರೆಯೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಎನ್‌ಒಸಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಹೇಳಲಾಗಿದೆ.
21 ಮೀಟರ್‌ಗಿಂತ ಕಡಿಮೆ ಎತ್ತರದ ಕಟ್ಟಡಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಸ್ವಯಂ ಘೋಷಣಾ ಪತ್ರವನ್ನು ಅಗ್ನಿ ಶಾಮಕ ಇಲಾಖೆಗೆ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.