ADVERTISEMENT

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 16:38 IST
Last Updated 23 ಫೆಬ್ರುವರಿ 2026, 16:38 IST
ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು. 
ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಪದಾಧಿಕಾರಿಗಳು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.    

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ಯಾಕೇಜ್ ಘೋಷಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.

ಒಳಮೀಸಲಾತಿ ಹೋರಾಟಗಾರರ ವಿರುದ್ಧದ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು. ಆದಿ ಜಾಂಬವ ಅಭಿವೃದ್ಧಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಲಿಡ್ಕರ್‌), ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ ₹ 2 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.

ನೇರ ನೇಮಕಾತಿಯ ಜೊತೆಗೆ ಪದೋನ್ನತಿ, ಬ್ಯಾಕ್ ಲಾಗ್‌, ಕೆಐಎಡಿಬಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ಐಪಿಡಿ ಸಾಲಪ್ಪ ಅವರ ಹೆಸರಿಡಬೇಕು. ದಿವಂಗತ ಐಪಿಡಿ ಸಾಲಪ್ಪ ಅವರ ವರದಿಯನ್ನು ಅನುಷ್ಠಾನಕ್ಕೆ ತರಬೇಕು. ವಿಶ್ವವಿದ್ಯಾಲಯಗಳನ್ನು ಒಂದು ಘಟಕವನ್ನಾಗಿ ಪರಿಗಣಿಸುವ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕು ಎಂದು ಮನವಿ ಮಾಡಿದರು.

ADVERTISEMENT

ಇದೇ ವೇಳೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಸಮಿತಿ ಮುಖಂಡ ಬಸವರಾಜ್ ಕೌತಾಳ್ ನೇತತ್ವದ ನಿಯೋಗ ಮನವಿ ಪತ್ರ ಸಲ್ಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.