ADVERTISEMENT

ಸಿಗದ ಹಕ್ಕುಪತ್ರ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2023, 4:40 IST
Last Updated 13 ಫೆಬ್ರುವರಿ 2023, 4:40 IST
ದಾಸರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ ಎಂದು ಆರೋಪಿಸಿ ಹೆಗ್ಗನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ಜಿ. ಧನಂಜಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು
ದಾಸರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ ಎಂದು ಆರೋಪಿಸಿ ಹೆಗ್ಗನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ಜಿ. ಧನಂಜಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು   

ಪೀಣ್ಯ ದಾಸರಹಳ್ಳಿ: ‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ 2018ರಿಂದ ಇಲ್ಲಿಯವರೆಗೆ ಸಾಕಷ್ಟು ಅನುದಾನ ಬಂದಿದ್ದರೂ ಅಭಿವೃದ್ಧಿ ಕಂಡಿಲ್ಲ. ಶಾಸಕರು ಅನುದಾನ ಬಂದಿಲ್ಲವೆಂದು ಸುಳ್ಳು ಹೇಳಿಕೊಂಡು ಓಡಾಟ ನಡೆಸುತ್ತಿದ್ದಾರೆ’ ಎಂದು ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಜಿ. ಧನಂಜಯ ಆರೋಪಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಅವರು, ’ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿವಾನಂದನಗರ, ಹೆಗ್ಗನಹಳ್ಳಿ, ರಾಜಗೋಪಾಲನಗರ, ಮಂಜುನಾಥನಗರ, ಮಲ್ಲಸಂದ್ರದಲ್ಲಿ ಈ ಹಿಂದೆಯೇ ಬಡವರಿಗೆ ನಿವೇಶನಗಳನ್ನು ನೀಡಲಾಗಿತ್ತು. ಆದರೆ, ಇಂದಿನವರೆಗೂ ಹಲವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಶಾಸಕರ ಹಿಂಬಾಲಕರಿಗಷ್ಟೇ ಈ ಯೋಜನೆ ಸೌಲಭ್ಯ ಸಿಕ್ಕಿದೆ. ಬಡವರಿಗೆ ಏನೂ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.‌

ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.