ಬೆಂಗಳೂರು: ಎಲ್ಲ ದರ್ಶಿನಿಗಳು, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್, ಪಬ್, ಕ್ಲಬ್ ಮತ್ತು ಎಲ್ಲ ಸಾರ್ವಜನಿಕ ಸ್ಥಳಗಳನ್ನು ‘ಧೂಮಪಾನ ಮುಕ್ತ ಪ್ರದೇಶ’ವೆಂದು ಘೋಷಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶನ ನೀಡಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ನಿರ್ದೇಶನಾಲಯ,ಧೂಮಪಾನ ಮಾಡದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.
ಅಲ್ಲದೆ, ‘ಧೂಮಪಾನ ಮುಕ್ತ ಪ್ರದೇಶ’ದ ನಿಯಮಾವಳಿ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಪರವಾನಗಿ ರದ್ದುಪಡಿಸಲಾಗುವುದು ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.