ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ಶಾಲಾ ವಾಹನ ತಪಾಸಣೆ ನಡೆಸಿದರು
ಬೆಂಗಳೂರು: ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಅನುಸರಿಸದೇ ನಗರದಲ್ಲಿ ಸಂಚರಿಸುತ್ತಿದ್ದ 65 ಶಾಲಾ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಾರಿಗೆ ಆಯುಕ್ತರು ತಿಳಿಸಿದ್ದಾರೆ.
‘ತೆರಿಗೆ ಪಾವತಿಸದೆ, ಅರ್ಹತಾ ಪತ್ರ ನವೀಕರಿಸದೇ ರಹದಾರಿ ನಿಯಮಗಳನ್ನು ಉಲ್ಲಂಘಿಸಿ ಶಾಲಾ ವಾಹನಗಳು ಸಂಚರಿಸುತ್ತಿರುವುದು ಗಮನಕ್ಕೆ ಬಂದತ್ತು. ಇದಕ್ಕಾಗಿಯೇ ಸಾರಿಗೆ ಇಲಾಖೆಯ ಜಂಟಿ ಆಯುಕ್ತರ ನೇತೃತ್ವದಲ್ಲಿ 10 ತಂಡಗಳನ್ನು ರಚಿಸಲಾಗಿತ್ತು. ಕಾರ್ಯಚರಣೆ ವೇಳೆ 500ಕ್ಕೂ ಹೆಚ್ಚು ಶಾಲಾ ವಾಹನಗಳನ್ನು ತಪಾಸಣೆ ನಡೆಸಲಾಯಿತು. 231 ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.