ADVERTISEMENT

ಬೆಂಗಳೂರು | ರಾಜಸ್ಥಾನ ಯುವಕ ಸಂಘ: ಪಠ್ಯಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 0:09 IST
Last Updated 26 ಆಗಸ್ಟ್ 2024, 0:09 IST
ಕಾರ್ಯಕ್ರಮದಲ್ಲಿ ಡಾ.ಸಿ.ಎನ್. ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ನೋಟ್‌ ಬುಕ್‌ ಕಿಟ್ ವವಿತರಿಸಿದರು. ರಾಜೇಶ್ ಶಾ, ಸಂಜಯ್ ಲುಂಕದ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ.ಸಿ.ಎನ್. ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ನೋಟ್‌ ಬುಕ್‌ ಕಿಟ್ ವವಿತರಿಸಿದರು. ರಾಜೇಶ್ ಶಾ, ಸಂಜಯ್ ಲುಂಕದ್ ಉಪಸ್ಥಿತರಿದ್ದರು.   

ಬೆಂಗಳೂರು: ರಾಜಸ್ಥಾನ ಯುವಕ ಸಂಘವು ಸುವರ್ಣ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬ್ಯಾಂಕ್ ಕಾರ್ಯಕ್ರಮದಲ್ಲಿ ಸರ್ಕಾರಿ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌, ಪಠ್ಯಪುಸ್ತಕ ಮತ್ತು ನೋಟ್‌ ಬುಕ್‌ಗಳನ್ನು ವಿತರಿಸಲಾಯಿತು. 

ಈ ವೇಳೆ ಮಾತನಾಡಿದ ರಾಜಸ್ಥಾನ ಯುವಕ ಸಂಘದ ಶೈಕ್ಷಣಿಕ ಮತ್ತು ಸಾರ್ವಜನಿಕ ಸೇವಾ ಟ್ರಸ್ಟ್‌ನ ಬೆಂಗಳೂರು ಘಟಕದ ಅಧ್ಯಕ್ಷ ರಾಜೇಶ್ ಶಾ, ‘ಕೆಲ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಖರೀದಿಸುವುದು ಕಷ್ಟಸಾಧ್ಯ. ಆದ್ದರಿಂದ ಪುಸ್ತಕ ಬ್ಯಾಂಕ್ ಯೋಜನೆ ಪ್ರಾರಂಭಿಸಲಾಯಿತು. ಯೋಜನೆಯಿಂದ 1.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಲಾಭ ಪಡೆದುಕೊಂಡಿದ್ದಾರೆ’ ಎಂದು ಹೇಳಿದರು. 

ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಸಂಜಯ್ ಲುಂಕದ್, ‘ನಗರದ ಹೃದಯ ಭಾಗದಲ್ಲಿ ಇರುವ ಎಸ್‌ಎಲ್‌ಎನ್‌ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ₹ 3.25 ಕೋಟಿ ವೆಚ್ಚದಲ್ಲಿ ಸಂಘದ ಬ್ಲಾಕ್ ಪ್ರಾರಂಭಿಸಲಾಗುವುದು’ ಎಂದು ತಿಳಿಸಿದರು. 

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಡಾ.ಸಿ.ಎನ್. ಮಂಜುನಾಥ್, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ನೋಟ್‌ ಬುಕ್‌ಗಳನ್ನು ವಿತರಿಸಿ ಶುಭಹಾರೈಸಿದರು. ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯ ಅಧ್ಯಕ್ಷ ಮೋಹನ್‌ಲಾಲ್‌ ರಂಕಾ ಮತ್ತು ಸೇತ್ರ ತಜ್ಞ ಡಾ. ನರಪತ್‌ ಸೋಲಂಕಿ ಅವರನ್ನು ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.