ADVERTISEMENT

ಬೆಂಗಳೂರು | ಕೋವಿಡ್: ಅಂತ್ಯಕ್ರಿಯೆಗೆ ನಿರಾಕರಿಸದಿರಲು ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 15:14 IST
Last Updated 11 ಜನವರಿ 2024, 15:14 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸಾಮಾನ್ಯ ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ನಿರಾಕರಿಸಬಾರದು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಕೊರೊನಾ ಸೋಂಕಿತ ಮೃತರ ಅಂತ್ಯಕ್ರಿಯೆಯನ್ನು ರಾಜ್ಯದ ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ನಡೆಸಬೇಕು. ಸಿಬ್ಬಂದಿ ಮುಖಗವಸು, ಕೈಗವಸು, ಪಿಪಿಇ ಕಿಟ್ ಧರಿಸಬೇಕು. ಅಂತ್ಯಕ್ರಿಯೆ ನಡೆದ ಬಳಿಕ ಸುರಕ್ಷತಾ ಸಾಧನಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದಾರೆ.  

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.