ADVERTISEMENT

ಒಕ್ಕಲಿಗರ ಸಂಘಕ್ಕೆ ಚುನಾವಣೆ: ತುರ್ತು ನೋಟಿಸ್

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 20:24 IST
Last Updated 8 ನವೆಂಬರ್ 2019, 20:24 IST

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಕೃಷ್ಣೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಒಕ್ಕಲಿಗರ ಸಂಘದ ಆಡಳಿತಾಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

‘ಎರಡು ತಿಂಗಳ ಒಳಗೆ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸುವಂತೆ ಸರ್ಕಾರ ಹಾಗೂ ಆಡಳಿತಾಧಿಕಾರಿಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.