ಬೆಂಗಳೂರು: ಜಲಮಂಡಳಿಯ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ. ವಿ.ರಾಮ್‌ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಮ್ಮಘಟ್ಟ ವೃತ್ತದ ಬಳಿ ‘ವಾಲ್ ಚೇಂಬರ್’ ಅಳವಡಿಸಲು ಅಗೆದಿದ್ದ ಗುಂಡಿಗೆ ಬಿದ್ದು ಯುವಕ ಮೃತಪಟ್ಟರು. ಆ ಸ್ಥಳಕ್ಕೆ ಭೇಟಿ ನೀಡಿದ್ದ ಅಧ್ಯಕ್ಷರು ಪರಿಶೀಲನೆ ನಡೆಸಿದರು.
‘ಈ ಘಟನೆ ನಡೆದಿರುವುದು ಬಹಳ ದುರದೃಷ್ಟಕರ ಸಂಗತಿ. ಕಾಮಗಾರಿ ನಡೆಸುವ ಸಂದರ್ಭದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿತ್ತು. ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದ್ದು, ತನಿಖೆ ನಡೆಯುತ್ತಿದೆ. ಅಂತಿಮ ವರದಿಯಲ್ಲಿ ಯಾವುದಾದರೂ ಲೋಪದೋಷ ಕಂಡಬಂದಲ್ಲಿ ಸಂಬಂಧಪಟ್ಟವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಲಮಂಡಳಿ ಸಿದ್ಧವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.