ADVERTISEMENT

ಗಿಡಗಳಿಗೆ ನೀರುಣಿಸಿದ ಬಿಡಿಎ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 20:18 IST
Last Updated 4 ಮಾರ್ಚ್ 2020, 20:18 IST
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನೆಟ್ಟಿರುವ ಸಸಿಗಳಿಗೆ ಸೋಮವಾರ ನೀರುಣಿಸಲಾಯಿತು
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನೆಟ್ಟಿರುವ ಸಸಿಗಳಿಗೆ ಸೋಮವಾರ ನೀರುಣಿಸಲಾಯಿತು   

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನೆಟ್ಟಿರುವ ಗಿಡಗಳು ಬಿಸಿಲಿನಿಂದ ಸೊರಗುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಸೋಮವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದ ಬಳಿಕ ಪ್ರಾಧಿಕಾರವು ಎಚ್ಚೆತ್ತು ಕೊಂಡಿದೆ. ಗಿಡಗಳಿಗೆ ನೀರುಣಿಸಲು ವ್ಯವಸ್ಥೆ ಮಾಡಿದೆ.

ಬಿಡಿಎ ಆಯುಕ್ತ ಜಿ.ಸಿ.ಪ್ರಕಾಶ್‌ ಅವರು ಪ್ರಾಧಿಕಾರದ ಅರಣ್ಯ ವಿಭಾಗದ ಅಧಿಕಾರಿಗಳಿಂದ ಈ ಬಗ್ಗೆ ವಿವರಣೆ ಪಡೆದು, ಈ ಬಡಾವಣೆಯ ಹಸಿರೀಕರಣಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

‘ನೆಟ್ಟಿರುವ ಸಸಿಗಳ ಪೋಷಣೆಗೆ ಸೂಕ್ತ ಕ್ರಮಕೈಗೊಂಡಿದ್ದೇವೆ. ಕೆಲವು ಗಿಡಗಳು ಬೇಸಿಗೆಯಲ್ಲಿ ಎಲೆ ಉದುರಿಸುತ್ತವೆ. ಹಾಗಾಗಿ ಅವು ಸತ್ತಿರುವಂತೆ ಕಾಣಿಸಬಹುದು ಎಂದು ಪ್ರಾಧಿಕಾರದ ಅರಣ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ಬಿಡಿಎ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.