
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಉಳಿಸಿ ಆಂದೋಲನದ ಭಾಗವಾಗಿ ‘ಮನರೇಗಾ ರಕ್ಷಣಾ ಒಕ್ಕೂಟ–ಕರ್ನಾಟಕ’ವು ಫೆ.2ರಂದು ಬೆಳಿಗ್ಗೆ 10ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಹಾ ಪಂಚಾಯತ್ ಹಮ್ಮಿಕೊಂಡಿದೆ.
ನರೇಗಾ ಯೋಜನೆಯು ಕಳೆದ ಎರಡು ದಶಕಗಳಿಂದ ದೇಶದ ಗ್ರಾಮೀಣ ಕೂಲಿಕಾರರು ಮತ್ತು ಸಣ್ಣ ರೈತರ ಜೀವನೋಪಾಯಕ್ಕೆ ಬಲವಾದ ಆಧಾರವಾಗಿತ್ತು. ಅಂಥ ಕಾನೂನನ್ನು ಕಿತ್ತು ಹಾಕಿರುವ ಕೇಂದ್ರ ಒಕ್ಕೂಟ ಸರ್ಕಾರವು ಹೊರತಂದಿರುವ ‘ವಿಕಸಿತ ಭಾರತ– ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾರ್ಮಿಕರ ಮಹಾ ಪಂಚಾಯತ್ ನಡೆಸಲಾಗುವುದು ಎಂದು ಒಕ್ಕೂಟ ತಿಳಿಸಿದೆ.
ಕರ್ನಾಟಕದ ರೈತ, ದಲಿತ, ಗ್ರಾಮೀಣ ಕೂಲಿಕಾರರು, ಭೂಮಿ–ವಸತಿ ರಹಿತರು, ಭೂ ಕಬಳಿಕೆ ವಿರೋಧಿ ಮತ್ತು ಸರ್ವೋದಯ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕಾರ್ಮಿಕರು, ಮಹಿಳೆಯರು, ರೈತರು ಸೇರಿದಂತೆ ಎಲ್ಲರೂ ಸೇರಿ ಪಂಚಾಯಿತಿ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಆ ತೀರ್ಮಾನವನ್ನು ಸರ್ಕಾರಕ್ಕೆ ಒಪ್ಪಿಸಲಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು, ಲೇಖಕರು, ಚಿಂತಕರು, ವಿವಿಧ ಕ್ಷೇತ್ರಗಳ ತಜ್ಞರು ಭಾಗವಹಿಸಲಿದ್ದಾರೆ. ಮಾಹಿತಿಗೆ 9902540033, 9591212825 ಸಂಪರ್ಕಿಸಬಹುದು ಎಂದು ಒಕ್ಕೂಟ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.