ADVERTISEMENT

ಹಳ್ಳಿಗಳ ಅಭಿವೃದ್ಧಿಗೆ ಮುಂದಾಗಿ: ಕಡತನಮಲೆ ಸತೀಶ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 21:14 IST
Last Updated 21 ಜನವರಿ 2020, 21:14 IST
ಶಿಬಿರವನ್ನು ಹರೀಶ್ ಉತ್ತಯ್ಯ ಉದ್ಘಾಟಿಸಿದರು. ವಕೀಲ ಕಡತನಮಲೆ ಸತೀಶ್, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜಗೌಡ ಇತರರು ಇದ್ದರು.
ಶಿಬಿರವನ್ನು ಹರೀಶ್ ಉತ್ತಯ್ಯ ಉದ್ಘಾಟಿಸಿದರು. ವಕೀಲ ಕಡತನಮಲೆ ಸತೀಶ್, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜಗೌಡ ಇತರರು ಇದ್ದರು.   

ಯಲಹಂಕ: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಹಳ್ಳಿಯ ಪರಿಸರ ಮತ್ತು ಜೀವನದ ಕುರಿತು ಅಧ್ಯಯನ ಕೈಗೊಳ್ಳುವ ಮೂಲಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು’ ಎಂದು ವಕೀಲ ಕಡತನಮಲೆ ಸತೀಶ್ ಹೇಳಿದರು.

ಎಂ.ಇ.ಎಸ್ ಶಿಕ್ಷಣಸಂಸ್ಥೆಯ ರಾಜಾಜಿನಗರ ಹಾಗೂ ಮಲ್ಲೇಶ್ವ ಶಾಖೆಗಳ ವತಿಯಿಂದ ರಾಜಾನುಕುಂಟೆ ಸಮೀಪದ ಕಡತನಮಲೆ ಗ್ರಾಮದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಸಪ್ತಾಹ ಸೇವಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಶಿಸ್ತು, ಸಮಯಪ್ರಜ್ಞೆ ಹಾಗೂ ಪ್ರಾಮಾಣಿಕತೆಯಂತಹ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದರು.

ಪೀಪಲ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಉತ್ತಯ್ಯ ಮಾತನಾಡಿ, ‘ವಿದ್ಯಾರ್ಥಿಗಳು ಮೊದಲು ಹಳ್ಳಿಯ ಬಡಜನರ ಕಷ್ಟ-ಸುಖಗಳನ್ನು ಅರಿತುಕೊಳ್ಳಬೇಕು. ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದಾಗ ಅವರ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯೋನ್ಮುಖರಾಗಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.