ಎಂ.ಕೆ. ನಾಯಕ್
ಬೆಂಗಳೂರು: ಕರ್ನಾಟಕ ವಿಕಾಸ ರಂಗವು ಕವಿ ಜರಗನಹಳ್ಳಿ ಶಿವಶಂಕರ್ ಅವರ ಸ್ಮರಣಾರ್ಥ ನೀಡುವ ‘ನುಡಿಸಿರಿ ಪ್ರಶಸ್ತಿ’ಗೆ ಕವಿ ಮಾಸ್ಕೇರಿ ಎಂ.ಕೆ. ನಾಯಕ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹5 ಸಾವಿರ ನಗದು ಒಳಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯವರಾದ ಎಂ.ಕೆ. ನಾಯಕ್ ಅವರು, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದು ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.