ADVERTISEMENT

ಸಿಎಎ: ಹೆಚ್ಚಿದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 5:57 IST
Last Updated 18 ಜನವರಿ 2020, 5:57 IST
ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸಲಾಯಿತು – ಪ್ರಜಾವಾಣಿ ಚಿತ್ರ
ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸಲಾಯಿತು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ನಡೆಯುತ್ತಿರುವ ಹೋರಾಟಗಳು ಮುಂದುವರಿದಿದ್ದು, ಬೆಂಗಳೂರು ಉತ್ತರ ನಿವಾಸಿಗಳ ವೇದಿಕೆ ಸದಸ್ಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಾಕಾರರು, ‘ದೇಶ ಉಳಿಸಿ, ಸಂವಿಧಾನ ರಕ್ಷಿಸಿ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

‘ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಸರ್ವರೂ ಸಮಾನರೆಂಬ ಭಾವನೆಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ನಾವೆಲ್ಲರೂ ಭಾರತೀಯರು ಎಂಬ ಮನೋಭಾವನೆ ಎಲ್ಲರಲ್ಲಿದೆ. ಇಂಥ ಜನರನ್ನು ಒಡೆದು ಅಶಾಂತಿ ನಿರ್ಮಿಸಲು ಕೇಂದ್ರ ಸರ್ಕಾರ ಈ ಕಾಯ್ದೆ ರೂಪಿಸಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಕಾಯ್ದೆಯನ್ನು ವಿರೋಧಿಸುವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಅರಿತುಕೊಳ್ಳಬೇಕು. ಕೂಡಲೇ ಕಾಯ್ದೆಯನ್ನು ಹಿಂಪಡೆದು ಶಾಂತಿಯುತ ದೇಶ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.