ADVERTISEMENT

ನರ್ಸಿಂಗ್ ಅಧಿಕಾರಿ ಸಾವು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 21:03 IST
Last Updated 12 ಅಕ್ಟೋಬರ್ 2020, 21:03 IST

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ನರ್ಸಿಂಗ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಂಕರಲಿಂಗೇಗೌಡ (44) ಸೋಮವಾರ ಕೋವಿಡ್‌ನಿಂದ ಸಾವಿಗೀಡಾದರು.

ಕಳೆದ 3ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ಸಾಗರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 19 ವರ್ಷಗ ಳಿಂದ ಅವರು ನಿಮ್ಹಾನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈವರೆಗೆ ನಿಮ್ಹಾನ್ಸ್‌ನಲ್ಲಿ 250ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸೋಂಕು ತಗುಲಿದೆ. ಈ ಪೈಕಿ, 60ಕ್ಕೂ ಹೆಚ್ಚು ಸಿಬ್ಬಂದಿ ಶುಶ್ರೂಷಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT