ADVERTISEMENT

ಬೆಂಗಳೂರು: ಐದು ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 17:28 IST
Last Updated 28 ಜನವರಿ 2026, 17:28 IST
<div class="paragraphs"><p>ಆಸ್ಪತ್ರೆ </p></div>

ಆಸ್ಪತ್ರೆ

   

–(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ವಿತರಿಸುವ ಯೋಜನೆಯನ್ನು ಆರೋಗ್ಯ ಇಲಾಖೆಯು ಐದು ಸರ್ಕಾರಿ ಆಸ್ಪತ್ರೆಗಳಿಗೆ ವಿಸ್ತರಿಸಿದೆ. 

ADVERTISEMENT

ಮಂಗಳೂರಿನ ವೆನ್‌ಲಾಕ್‌ ಜಿಲ್ಲಾ ಆಸ್ಪತ್ರೆ, ಧಾರವಾಡದ ಜಿಲ್ಲಾ ಆಸ್ಪತ್ರೆ, ಬೆಂಗಳೂರಿನ ಯಲಹಂಕ ಸಾರ್ವಜನಿಕ ಆಸ್ಪತ್ರೆ, ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಂಗಳೂರು ಗ್ರಾಮಾಂತರದ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ಪರಿಚಯಿಸಲಾಗುತ್ತಿದೆ. ಈ ಆಹಾರವನ್ನು ಇಸ್ಕಾನ್ ಪೂರೈಕೆ ಮಾಡಲಿದೆ. ನಾಲ್ಕು ತಿಂಗಳ ಅವಧಿಗೆ ಈ ಆಹಾರಕ್ಕೆ ₹ 2.83 ಕೋಟಿ ಭರಿಸಲಾಗುತ್ತಿದೆ. 

ಕಳೆದ ಸೆಪ್ಟೆಂಬರ್‌ನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ, ಜಯನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.