ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಎನ್‌ಡಬ್ಲ್ಯುಕೆಆರ್‌ಟಿಸಿಗೆ 1000 ಚಾಲಕರು ಮತ್ತು ಚಾಲಕ ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಎನ್‌ಡಬ್ಲ್ಯುಕೆಆರ್‌ಟಿಸಿ ಅಧ್ಯಕ್ಷ ಭರಮಗೌಡ ಕಾಗೆ ಮಾತನಾಡಿ, ‘ಸಂಸ್ಥೆಗೆ ಇನ್ನೂ ಚಾಲನಾ ಸಿಬ್ಬಂದಿಯ ಅವಶ್ಯಕತೆ ಇದೆ. ಘಟಕಗಳ ಸುಧಾರಣೆ ಮಾಡಬೇಕಾಗಿದೆ. ಅದಕ್ಕಾಗಿ ಸರ್ಕಾರದಿಂದ ವಿಶೇಷ ಅನುದಾನ ಅಗತ್ಯ’ ಎಂದು ತಿಳಿಸಿದರು.
ಎನ್‌ಡಬ್ಲ್ಯುಕೆಆರ್‌ಟಿಸಿ ಪ್ರಿಯಾಂಗಾ ಎಂ., ಉಪಾಧ್ಯಕ್ಷ ಪೀರ್‌ಸಾಬ್ ಕೌತಾಳ, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.