ADVERTISEMENT

ಮುಖ್ಯಮಂತ್ರಿ ಪ್ರಮಾಣವಚನ; ವಿದ್ಯಾರ್ಥಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಮೇ 2023, 15:52 IST
Last Updated 19 ಮೇ 2023, 15:52 IST
ಡಿ.ಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ
ಡಿ.ಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ    

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೇ 20ರಂದು ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಇದ್ದು, ಸುತ್ತಮುತ್ತಲಿನ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಬರೆಯಲಿರುವ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಒಂದು ವೇಳೆ ಅಭ್ಯರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡವರು ಪೊಲೀಸರಿಗೆ ಪರೀಕ್ಷಾ ಪ್ರವೇಶಪತ್ರ ತೋರಿಸಿದರೆ ಅಂತಹವರನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ  ತಿಳಿಸಿದ್ದಾರೆ. ಕಂಠೀರವ ಕ್ರೀಡಾಂಗಣ ಬಳಿ ಇರುವ ಸಿಇಟಿ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ಅಭ್ಯರ್ಥಿಗಳು ತಲುಪಬೇಕು.

ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲ ಕಾಲೇಜುಗಳು

ADVERTISEMENT

* ಬಿಷಪ್ ಕಾಟನ್ ಮಹಿಳಾ ಪದವಿಪೂರ್ವ ಕಾಲೇಜು 
* ಗುಡ್ ವಿಲ್ ಬಾಲಕಿಯರ ಪದವಿಪೂರ್ವ ಕಾಲೇಜು 
* ಸೆಂಟ್ ಜೋಸೆಫ್ಸ್ ಪದವಿಪೂರ್ವ ಕಾಲೇಜು 
* ಸೆಂಟ್ ಜೋಸೆಫ್ಸ್ ಇಂಡಿಯನ್ ಪಿಯು ಕಾಲೇಜು 
* ಸೆಂಟ್ ಆ್ಯನ್ಸ್ ಬಾಲಕಿಯರ ಪಿಯು ಕಾಲೇಜು 
* ಆರ್. ಬಿ.ಎ.ಎನ್.ಎಂ.ಎಸ್ ಪಿಯು ಕಾಲೇಜು 
* ಎಸ್.ಜೆ.ಆರ್.ಸಿ. ಬಿಐಎಫ್ಆರ್ ಪಿಯು ಕಾಲೇಜು 
* ಕ್ಯಾಥೆಡ್ರಲ್ ಕಾಂಪೋಸಿಟ್ ಪಿಯು ಕಾಲೇಜು 
* ಸೆಂಟ್ ಯುಫ್ರಿಶಿಯಸ್ ಬಾಲಕಿಯರ ಪ್ರೌಢಶಾಲೆ ಮತ್ತು ಕಾಂಪೋಸಿಟ್ ಪಿಯು ಕಾಲೇಜು 
* ಸ್ಟ್ರೇಸಿ ಮೆಮೋರಿಯಲ್ ಕಾಂಪೋಸಿಟ್ ಪಿಯು ಕಾಲೇಜು 
* ಹಸನತ್ ಮಹಿಳಾ ಪಿಯು ಕಾಲೇಜು 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.