ADVERTISEMENT

ಭಾರತೀಯ ಕಿಸಾನ್ ಸಂಘ ತೀವ್ರ ಆಕ್ಷೇಪ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 20:24 IST
Last Updated 29 ಜೂನ್ 2020, 20:24 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನಿಯೋಗ ಭೇಟಿ ಮಾಡಿತು. ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್‍ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್ ಹಾಗೂ ಕೃಷಿ ಪ್ರಯೋಗ ಪರಿವಾರದ ಅರುಣ, ಬಿ.ಎಂ.ಕುಮಾರಸ್ವಾಮಿ ಇದ್ದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನಿಯೋಗ ಭೇಟಿ ಮಾಡಿತು. ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್‍ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್ ಹಾಗೂ ಕೃಷಿ ಪ್ರಯೋಗ ಪರಿವಾರದ ಅರುಣ, ಬಿ.ಎಂ.ಕುಮಾರಸ್ವಾಮಿ ಇದ್ದರು.   

ಬೆಂಗಳೂರು: ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆಕ್ಷೇಪ ವ್ಯಕ್ತಪಡಿಸಿ ಭಾರತೀಯ ಕಿಸಾನ್ ಸಂಘ, ಸ್ವದೇಶಿ ಜಾಗರಣ ಮಂಚ್ ಹಾಗೂ ಕೃಷಿ ಪ್ರಯೋಗ ಪರಿವಾರ ಸಂಘಟನೆಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಆರ್ಥಿಕ ತಜ್ಞ ಬಿ.ಎಂ.ಕುಮಾರಸ್ವಾಮಿ, 'ತಿದ್ದುಪಡಿ ಮೂಲಕ ರೈತರಲ್ಲದವರಿಗೆ ಕೃಷಿ ಭೂಮಿ ಖರೀದಿಗೆ ಅವಕಾಶ ಕೊಡುವುದು ಸ್ವಾಗತಾರ್ಹ. ಆದರೆ, ಭೂಮಿಯನ್ನು ಕೃಷಿಗೆ ಹೊರತುಪಡಿಸಿ ಕೈಗಾರಿಕೆಗಳ ಉದ್ದೇಶಗಳಿಗೆ ಬಳಸಬಾರದು ಹಾಗೂ ಮಾರಾಟವೂ ಮಾಡಬಾರದು ಎಂಬ ಷರತ್ತು ವಿಧಿಸಬೇಕಿತ್ತು. ಕಾಯ್ದೆಗೆ ತಿದ್ದುಪಡಿ ತರುವ ಮೊದಲು ರೈತ ಸಂಘಟನೆಗಳೊಂದಿಗೆ ಚರ್ಚಿಸಬೇಕಿತ್ತು. ವಿಷಯ ಪರಿಣತರ ಸಮಿತಿ ರಚಿಸಿ, ಸಲಹೆ ಪಡೆಯಬೇಕಿತ್ತು' ಎಂದರು.

'ಮುಂದಿನ ಐದು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಂದ ಲಾಭ ಪಡೆಯುವ ಜಮೀನು ಹಾಗೂ ಮಳೆ ಆಧಾರಿತ ಕೃಷಿ ಭೂಮಿಯಲ್ಲಿ ಕೃಷಿಯೇತರ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ. ಕಾಯ್ದೆಯ ತಿದ್ದುಪಡಿ ಪ್ರಸ್ತಾವದಲ್ಲಿರುವ ಈ ಅಂಶವನ್ನು ಕೈಬಿಡಲಾಗುವುದು‘ ಎಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.