ವಿಜಯಲಕ್ಷ್ಮೀ
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ಅವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ವಿಜಯಲಕ್ಷ್ಮೀ ಕುರಿತು ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೊ ಕುರಿತು ಕೆಲವು ವ್ಯಕ್ತಿಗಳು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದರು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಬಿ.ಆರ್.ಭಾಸ್ಕರ್ ಪ್ರಸಾದ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ನಗರ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದು, ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಅಶ್ಲೀಲವಾಗಿ ಪ್ರತ್ರಿಕ್ರಿಯಿಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.