ADVERTISEMENT

ಒಸಿಐ: ಸಿಇಟಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 19:37 IST
Last Updated 2 ಮಾರ್ಚ್ 2020, 19:37 IST

ಬೆಂಗಳೂರು: ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ವಿದ್ಯಾರ್ಥಿಗಳು 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ಅನುಮತಿ ಹೈಕೋರ್ಟ್‌ ಅನುಮತಿ ನೀಡಿದೆ.

ಈ ಕುರಿತಂತೆ ಪ್ರತೀಕ್‌ ನರೇಂದ್ರ ಕಾಮತ್‌ ಸೇರಿದಂತೆ 9 ವಿದ್ಯಾರ್ಥಿಗಳು ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಭಾರತೀಯ ಸಾಗರೋತ್ತರ ವ್ಯವ ಹಾರಗಳ ಸಚಿವಾಲಯದ ಕಾರ್ಯದರ್ಶಿ ಸೇರಿದಂತೆ ಎಲ್ಲರಿಗೂ ನೋಟಿಸ್ ಜಾರಿ ಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.