ADVERTISEMENT

Odisha Train Accident: ಕರ್ನಾಟಕದವರಿಗಾಗಿ ಸಹಾಯವಾಣಿಗಳ ಮಾಹಿತಿ ಇಲ್ಲಿದೆ..

ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಭೀಕರ ರೈಲ್ವೆ ದುರಂತ: ಬೆಂಗಳೂರಿನ ಬೈಯಪ್ಪನಹಳ್ಳಿಯಿಂದ ಹೊರಟಿದ್ದ ಹೌರಾ ಎಕ್ಸ್‌ಪ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜೂನ್ 2023, 3:30 IST
Last Updated 3 ಜೂನ್ 2023, 3:30 IST
ಬಾಲಸೋರ್ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಲಾಯಿತು– ಪಿಟಿಐ ಚಿತ್ರ
ಬಾಲಸೋರ್ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಲಾಯಿತು– ಪಿಟಿಐ ಚಿತ್ರ   

ಬೆಂಗಳೂರು: ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣ ಬಳಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದ ಇಲ್ಲಿವರೆಗೆ 233 ಪ್ರಯಾಣಿಕರು ಮೃತಪಟ್ಟು, 900 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಪಶ್ಚಿಮ ಬಂಗಾಳದ ಹೌರಾಕ್ಕೆ ಹೊರಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿದ್ದ ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದರಲ್ಲಿ ಕರ್ನಾಟಕದವರೂ ಇರುವ ಶಂಕೆಯಿದೆ.

ಬೈಯಪ್ಪನಹಳ್ಳಿಯಿಂದ ಹೊರಟಿದ್ದ ರೈಲು, ಕೆ.ಆರ್. ಪುರ ಹಾಗೂ ಬಂಗಾರಪೇಟೆ ನಿಲ್ದಾಣ ಮಾರ್ಗವಾಗಿ ಆಂಧ್ರಪ್ರದೇಶ ಪ್ರವೇಶಿಸಿ ಹೌರಾದತ್ತ ಹೊರಟಿತ್ತು. ಇದೇ ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕರ್ನಾಟಕದ ಪ್ರಯಾಣಿಕರಿದ್ದರು. ಜೊತೆಗೆ, ಬೆಂಗಳೂರಿನಲ್ಲಿ ನೆಲೆಸಿದ್ದ ಉತ್ತರ ಪ್ರದೇಶ ಕಾರ್ಮಿಕರೂ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದೆ. ಆದರೆ, ಯಾರೊಬ್ಬರ ಹೆಸರು ಹಾಗೂ ವಿಳಾಸ ಸದ್ಯಕ್ಕೆ ಗೊತ್ತಾಗಿಲ್ಲ.

ADVERTISEMENT

ಪ್ರಯಾಣಿಕರ ಬಗ್ಗೆ ಮಾಹಿತಿ ಇದ್ದವರು ಅಥವಾ ಕುಟುಂಬದ ಸದಸ್ಯರು ಸಹಾಯವಾಣಿಗೆ ಕರೆ ಮಾಡಬಹುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಶೇಷವಾಗಿ ಕರ್ನಾಟಕದವರಿಗಾಗಿ ಸಹಾಯವಾಣಿಗಳು ಇಲ್ಲಿವೆ

ಸಹಾಯವಾಣಿ ಸಂಖ್ಯೆ: 080–22942666, 080–22871291 (ಬೆಂಗಳೂರು ರೈಲ್ವೆ ನಿಯಂತ್ರಣ ಕೊಠಡಿ) ಹಾಗೂ ಒಡಿಶಾದ 08249591559, 67822262286.

ಉಳಿದಂತೆ ರೈಲ್ವೆ ಇಲಾಖೆ ಪ್ರಕಟಿಸಿರುವ ಸಹಾಯವಾಣಿಗಳ ಮಾಹಿತಿ ಈ ಕೆಳಕಂಡಂತಿದೆ.

ಒಡಿಶಾ, ಪಶ್ಚಿಮ ಬಂಗಾಳದ 12 ರೈಲ್ವೆ ನಿಲ್ದಾಣಗಳ ಸಹಾಯವಾಣಿ ಸಂಖ್ಯೆಯನ್ನು ನೀಡಲಾಗಿದೆ.

ಭದ್ರಕ್ 8455889900

ಜೈಪುರ್ ಕೆ ರೋಡ್ 8455889906

ಕಟಕ್ 8455889917

ಭುವನೇಶ್ವರ್ 8455889922

ಬಾಲುಗಾಂವ್ 9937732169

ಪಾಲಸಾ 8978881006

ಹೌರಾ 03326382217

ಖರಗಪುರ್ 8972073925

ಬಾಲಸೋರ್ 8249591559

ಶಾಲಿಮಾರ್ 9909970746

ಕುರ್ದಾ ರೋಡ್ 6370108046

ಬ್ರಹ್ಮಪುರ್ 89173887241

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.