ಬೆಂಗಳೂರು: ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿರುವ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿಯುತ್ತಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾಗಿದೆ.
ಕೃಷ್ಣಪ್ಪ ಎಂಬುವರಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶೆಲ್ ಕಂಪನಿಗೆ ಸೇರಿದ ಆಯಿಲ್ ಉತ್ಪನ್ನಗಳನ್ನು ಗೋದಾಮಿನಲ್ಲಿ ಇಡಲಾಗಿತ್ತು. ಸುಮಾರು 10-12 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ನೆಲಮಂಗಲ, ಪೀಣ್ಯ ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದಾರೆ.
ಸದ್ಯ ಗೋದಾಮಿನ ಒಳಗೆ ಯಾರೂ ಸಿಲುಕಿಕೊಂಡಿಲ್ಲ ಎಂದು ಹೇಳಲಾಗಿದೆ. ಕಾರ್ಯಾಚರಣೆ ಮುಕ್ತಾಯವಾದ ಬಳಿಕ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕಿಟ್ ಕಾರಣ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.