
ಬೆಂಗಳೂರು: ಜನವರಿ 9 ರಿಂದ 11ರವರೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್, ಗಾಯತ್ರಿ ವೃಕ್ಷದಲ್ಲಿ ನಾಲ್ಕನೇ ಆವೃತ್ತಿಯ ‘ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್‌ಪೊ’ ನಡೆಯಲಿದೆ.
ಒಕ್ಕಲಿಗ ಉದ್ಯಮಿಗಳ ಬೆಳವಣಿಗೆ ಮತ್ತು ಯಶಸ್ಸಿಗಾಗಿಯೇ ಮೂರು ದಿನಗಳ ಎಕ್ಸ್‌ಪೊ ಆಯೋಜಿಸಲಾಗಿದೆ. ಇದು ಒಕ್ಕಲಿಗ ಸಮುದಾಯದ ಉದ್ಯಮಶೀಲತೆಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಇನೋವೇಶನ್, ನೆಟ್‌ವರ್ಕಿಂಗ್ ಹಾಗೂ ಸಹಭಾಗಿತ್ವಕ್ಕೆ ನೆರವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಆದಿ ಚುಂಚನಗಿರಿಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸ್ಪಟಿಕಪುರಿ ಸಂಸ್ಥಾನದ ನಂಜಾವಧೂತಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಭಾಗವಹಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾಸ್ವಾಮಿ, ಶೋಭಾ ಕರಂದ್ಲಾಜೆ, ಮಾಜಿ ಸಂಸದ ಬಿ.ಎನ್. ಬಚ್ಚೇಗೌಡ, ಸಚಿವರಾದ ಎಂ.ಸಿ. ಸುಧಾಕರ್, ಕೃಷ್ಣ ಬೈರೇಗೌಡ, ಎನ್. ಚಲುವರಾಯಸ್ವಾಮಿ, ಕೆ. ವೆಂಕಟೇಶ್, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಂಸದ ಸಿ.ಎನ್. ಮಂಜುನಾಥ, ಶಾಸಕರಾದ ಸಿ.ಎನ್. ಅಶ್ವತ್ಥ ನಾರಾಯಣ, ಎಂ. ಕೃಷ್ಣಪ್ಪ, ಜಿ.ಟಿ. ದೇವೇಗೌಡ, ಕೆ. ಗೋಪಾಲಯ್ಯ, ಶರತ್ ಬಚ್ಚೇಗೌಡ, ಕೆ.ಎಚ್. ಪುಟ್ಟಸ್ವಾಮಿ ಗೌಡ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್, ಒಕ್ಕಲಿಗರ ಸಂಘದ ರಾಜ್ಯ ಅಧ್ಯಕ್ಷ ಎಲ್. ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.
‘ಎಕ್ಸ್‌ಪೊದಲ್ಲಿ ಪಾಲ್ಗೊಳ್ಳುವ ಆಸಕ್ತರು ಎಫ್‌ಸಿ ನೆಕ್ಸ್ಟ್ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಉತ್ಪನ್ನಗಳು ಮತ್ತು ವ್ಯಾಪಾರಕ್ಕೆ ಸಂಬಂಧಿಸಿದ 200ಕ್ಕೂ ಹೆಚ್ಚು ಮಳಿಗೆಗಳು ಇರಲಿದ್ದು, ಪ್ರದರ್ಶನ ಮತ್ತು ಮಾರಾಟ ಮಳಿಗೆ, ಆಹಾರ ಮಳಿಗೆಗಳನ್ನು ಮುಂಗಡವಾಗಿ ಕಾಯ್ದಿರಿಸಬಹುದು. 70 ಸಾವಿರಕ್ಕೂ ಅಧಿಕ ಯುವ ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಫಸ್ಟ್ ಸರ್ಕಲ್ ಮುಖ್ಯ ಮಾರ್ಗದರ್ಶಕ ಜಯರಾಮ್ ರಾಯಪುರ, ಫಸ್ಟ್ ಸರ್ಕಲ್ ಅಧ್ಯಕ್ಷ ಡಿ. ಮುನಿರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.