ADVERTISEMENT

ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಕೊಲೆ ಪ್ರಕರಣ: ಸಿಸಿಬಿಗೆ ಕಡತ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2025, 15:57 IST
Last Updated 22 ಏಪ್ರಿಲ್ 2025, 15:57 IST
ಓಂ ಪ್ರಕಾಶ್‌ 
ಓಂ ಪ್ರಕಾಶ್‌    

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯ ಪೊಲೀಸರು, ಸಿಸಿಬಿ ಪೊಲೀಸರಿಗೆ ಮಂಗಳವಾರ ಮಧ್ಯಾಹ್ನ ಕಡತ ಹಸ್ತಾಂತರಿಸಿದರು.

‘ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಸಲಾಗಿತ್ತು. ಸೋಮವಾರ ಸಂಜೆ ಪ್ರಕರಣದ ತನಿಖೆಯನ್ನು ಸಿಸಿಬಿ ವರ್ಗಾವಣೆ ಮಾಡಿದ್ದರಿಂದ ಆರೋಪಿಗಳ ಹೇಳಿಕೆಯ ವಿಡಿಯೊ ರೆಕಾರ್ಡ್‌ಗಳು, ಸ್ಥಳ ಮಹಜರು ಮಾಹಿತಿ, ಓಂ ಪ್ರಕಾಶ್ ಅವರ ಸಂಬಂಧಿಕರ ಹೇಳಿಕೆಯ ಮಾಹಿತಿಯ ಕಡತವನ್ನು ಸಿಸಿಬಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಕಸ್ಟಡಿಗೆ ಪಡೆಯಲು ಸಿದ್ಧತೆ: ‘ಕೊಲೆ ಪ್ರಕರಣದ ಸಂಬಂಧ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಾಡಿ ವಾರಂಟ್‌ ಮೇಲೆ ಕಸ್ಟಡಿಗೆ ಪಡೆದುಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎರಡು ದಿನಗಳಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು’ ಎಂದು ಮೂಲಗಳು ಹೇಳಿವೆ.

ADVERTISEMENT

‘ಎರಡನೇ ಆರೋಪಿ ಕೃತಿ ಅವರಿಗೆ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಕೊಲೆ ಪ್ರಕರಣದಲ್ಲಿ ಕೃತಿ ಅವರ ಪಾತ್ರದ ಕುರಿತು ಗೊತ್ತಾಗಲಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.