ADVERTISEMENT

29ರಂದು ಓಂ ಶ್ರೀ ಸಾಯಿರಾಂ ಸಾಂಸ್ಕೃತಿಕ ಕಲಾ ವೇದಿಕೆಯ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 14:32 IST
Last Updated 24 ಜನವರಿ 2026, 14:32 IST
<div class="paragraphs"><p>ರವೀಂದ್ರ ಕಲಾಕ್ಷೇತ್ರ</p></div>

ರವೀಂದ್ರ ಕಲಾಕ್ಷೇತ್ರ

   

ಬೆಂಗಳೂರು: ‘ಓಂ ಶ್ರೀ ಸಾಯಿರಾಂ ಸಾಂಸ್ಕೃತಿಕ ಕಲಾ ವೇದಿಕೆಯ 12ನೇ ವಾರ್ಷಿಕೋತ್ಸವ ಜ.29ರಂದು ಮಧ್ಯಾಹ್ನ 2ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಸ್‌., ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ  ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ. ನಾಡಿನ ರಂಗಭೂಮಿಯ 25 ಕಲಾವಿದರಿಗೆ ಕಲಾ ಸಾಮ್ರಾಟ್ ಸ್ಟಾರ್ ಅವಾರ್ಡ್ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಟಿ ಉಮಾಶ್ರೀ, ಶಾಸಕರಾದ ಎಂ. ಕೃಷ್ಣಪ್ಪ, ಪ್ರಿಯಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಹಾಗೂ ವೇದಿಕೆಯ ಅಧ್ಯಕ್ಷ ಗೋಲ್ಡನ್ ಸುರೇಶ್ ಭಾಗವಹಿಸುವರು ಎಂದು ತಿಳಿಸಿದರು. 

ಉಪಾಧ್ಯಕ್ಷೆ ಲತ, ಖಜಾಂಚಿ ಮಹೇಶ್ ಎನ್. ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.