ನಮ್ಮ ಮೆಟ್ರೊ
ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಎಂ.ಜಿ. ರಸ್ತೆ–ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಜೂನ್ 22ರಂದು ಬೆಳಿಗ್ಗೆ 7ರಿಂದ 9ರವರೆಗೆ ಎರಡು ತಾಸು ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.
ಹಲಸೂರು ಮತ್ತು ಟ್ರಿನಿಟಿ ನಿಲ್ದಾಣಗಳ ನಡುವೆ ನಿಗದಿತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಚಲ್ಲಘಟ್ಟದಿಂದ ಎಂ.ಜಿ. ರಸ್ತೆವರೆಗೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (ಕಾಡುಗೋಡಿ)ವರೆಗೆ ಮೆಟ್ರೊ ಸಂಚಾರ ಎಂದಿನಂತೆ ಇರಲಿದೆ. ಎಂ.ಜಿ. ರಸ್ತೆ–ಬೈಯ್ಯಪ್ಪನಹಳ್ಳಿ ನಡುವೆ ಬೆಳಿಗ್ಗೆ 9ರಿಂದ ಮೆಟ್ರೊ ಸಂಚಾರ ಪ್ರಾರಂಭವಾಗಲಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.