ADVERTISEMENT

ರೆಮ್‌ಡಿಸಿವಿರ್: ಜಯನಗರ ಜನರಲ್ ಆಸ್ಪತ್ರೆ ಶುಶ್ರೂಷಕ ಬಂಧನ

​ಪ್ರಜಾವಾಣಿ ವಾರ್ತೆ
Published 15 ಮೇ 2021, 6:31 IST
Last Updated 15 ಮೇ 2021, 6:31 IST
ಮಾರುತಿ
ಮಾರುತಿ   

ಬೆಂಗಳೂರು: ರೆಮ್‌ಡಿಸಿವಿರ್ ಚುಚ್ಚುಮದ್ದು ಅಕ್ರಮವಾಗಿ ಮಾರುತ್ತಿದ್ದ ಆರೋಪದಡಿ ಮಾರುತಿ ಎಂಬಾತನನ್ನು ಸಿಸಿಬಿ ಪೊಲೀಸರಯ ಬಂಧಿಸಿದ್ದಾರೆ.

'ಆರೋಪಿ ಮಾರುತಿ, ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಆತನ ವಿರುದ್ಧ ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ' ಎಂದು ಪೊಲೀಸರು ಹೇಳಿದರು.

'ತನ್ನ ಬಳಿ ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿ, ಕೊರೊನಾ ಸೋಂಕಿತರು ಹಾಗೂ ಅವರ ಸಂಬಂಧಿಕರಿಗೆ ದುಬಾರಿ ಬೆಲೆಗೆ ಮಾರುತ್ತಿದ್ದರು. ಆತನಿಂದ ರೆಮ್‌ಡಿಸಿವಿರ್ ಚುಚ್ಚುಮದ್ದಿನ 9 ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.