ADVERTISEMENT

160 ಬೋಧಕರ ನೇಮಕ ಪ್ರಕ್ರಿಯೆ ಶೀಘ್ರ ಆರಂಭ: ಲಿಂಗರಾಜ ಗಾಂಧಿ

ಬೆಂಗಳೂರು ನಗರ ವಿ.ವಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2023, 21:26 IST
Last Updated 3 ಜನವರಿ 2023, 21:26 IST
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಪುನರ್‌ಮನನ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿದರು. ಕುಲಸಚಿವ ಸಿ.ಎನ್. ಶ್ರೀಧರ, ಡಾ. ವಿನಿತಾ ಸಾಹು ಇದ್ದರು
ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಪುನರ್‌ಮನನ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿದರು. ಕುಲಸಚಿವ ಸಿ.ಎನ್. ಶ್ರೀಧರ, ಡಾ. ವಿನಿತಾ ಸಾಹು ಇದ್ದರು   

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಶೀಘ್ರದಲ್ಲೇ 160 ಬೋಧಕ ಮತ್ತು 120 ಬೋಧಕೇತರ ಕಾಯಂ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯು ಆರಂಭವಾಗಲಿದೆ ಎಂದು ಕುಲಪತಿ ಪ್ರೊ. ಲಿಂಗರಾಜ ಗಾಂಧಿ ತಿಳಿಸಿದರು.

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್ತು (ನ್ಯಾಕ್) ಪುನರ್‌
ಮನನ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ‘ವಿಶ್ವವಿದ್ಯಾಲಯದಲ್ಲಿ‌ ಆಡಳಿತ ಸುಧಾರಣೆ ಜತೆಗೆ ಶೈಕ್ಷಣಿಕ ಗುಣಮಟ್ಟ ಮತ್ತು ಸಂಶೋಧನೆಗೆ ಆದ್ಯತೆ ನೀಡಲಾಗುತ್ತಿದೆ’ ಎಂದರು. ‘ಒಂದೂವರೆ ಶತಮಾನಕ್ಕೂ ಹೆಚ್ಚು ಸುದೀರ್ಘ ಇತಿಹಾಸವಿರುವ ಸೆಂಟ್ರಲ್ ಕಾಲೇಜಿನ ಪಾರಂಪರಿಕ ಕಟ್ಟಡಗಳ ಪುನರುಜ್ಜೀವನ ಕಾರ್ಯವು ಭರದಿಂದ ಸಾಗಿದೆ. ನೂತನ ಶೈಕ್ಷಣಿಕ ವಿಭಾಗ ಮತ್ತು ಕ್ರೀಡಾ ಸಂಕೀರ್ಣಗಳ ನಿರ್ಮಾಣ ಹಾಗೂ ಗ್ರಂಥಾಲಯ ಆಧುನೀಕರಣ ಕಾರ್ಯವೂ ಪ್ರಗತಿಯಲ್ಲಿದೆ’ ಎಂದು ಅವರು ವಿವರಿಸಿದರು.

‘ರಾಜ್ಯದ ದೊಡ್ಡ ವಿಶ್ವವಿದ್ಯಾಲಯಗಳ ಪೈಕಿ ಪ್ರಮುಖವಾಗಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯವು 240 ಸಂಯೋಜಿತ ಮತ್ತು ಸ್ವಾಯುತ್ತ ಕಾಲೇಜುಗಳ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 1.35 ಲಕ್ಷ ವಿದ್ಯಾರ್ಥಿಗಳ ಬೃಹತ್ ಸಮೂಹ ಹೊಂದಿದ್ದು ಕಳೆದ ನಾಲ್ಕೈದು ವರ್ಷಗಳ ಅವಧಿಯಲ್ಲಿ ಅಗಾಧ ಪ್ರಗತಿ ಸಾಧಿಸಿದೆ’ ಎಂದು ಅವರು ಹೇಳಿದರು.

ADVERTISEMENT

ಉಪನ್ಯಾಸ ನೀಡಿದ ನ್ಯಾಕ್ ಸಹಾಯಕ ಸಲಹೆಗಾರ ಡಾ. ವಿನಿತಾ ಸಾಹು, ‘ವಿಶ್ವವಿದ್ಯಾಲಯಗಳು ಸಂಶೋ ಧನಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಉದ್ಯಮ ವಲ ಯದ ಸಹಭಾಗಿತ್ವದೊಂದಿಗೆ ಉತ್ತಮ ಪ್ರಗತಿ ಸಾಧಿಸಬಹುದಾಗಿದೆ’ ಎಂದು ಪ್ರತಿಪಾದಿಸಿದರು. ಬಿಸಿಯು ಕುಲಸಚಿವ ಸಿ.ಎನ್. ಶ್ರೀಧರ, ಪ್ರೊ. ವಿ. ಲೋಕೇಶ, ವಿತ್ತಾಧಿಕಾರಿ ಜಿ.ಪಿ ರಘು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.