ADVERTISEMENT

ಆಲೂಗಡ್ಡೆ-ಈರುಳ್ಳಿ ವ್ಯಾಪಾರ: ದಾಸನಪುರಕ್ಕೆ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 20:46 IST
Last Updated 28 ಮಾರ್ಚ್ 2020, 20:46 IST

ಬೆಂಗಳೂರು: ಸಾಮಾಜಿಕ ಅಂತರ ಪಾಲನೆ ದೃಷ್ಟಿಯಿಂದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯ ಈರುಳ್ಳಿ, ಬೆಳ್ಳುಳ್ಳಿ ಮತ್ತು ಆಲೂಗಡ್ಡೆ ವ್ಯಾಪಾರವನ್ನು ಇದೇ 30ರಿಂದ ಏಪ್ರಿಲ್ 30ರವರೆಗೆ ತುಮಕೂರು ರಸ್ತೆಯ ದಾಸನಪುರ ಉಪ ಮಾರುಕಟ್ಟೆ ಪ್ರಾಂಗಣಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಿ, ಕೃಷಿ ಮಾರಾಟ ಇಲಾಖೆ ಆದೇಶ ಹೊರಡಿಸಿದೆ.

ಸಾಮಾಜಿಕ ಅಂತರ ಪಾಲಿಸುವುದರಿಂದ ಸೋಂಕು ಪ್ರಸರಣ ತಡೆಗಟ್ಟಬಹುದು ಎಂಬ ಉದ್ದೇಶದಿಂದ ಇಲಾಖೆ ವ್ಯಾಪಾರ ಸ್ಥಳಾಂತರಿಸಲು ಮುಂದಾಗಿದೆ.

‘ಎಪಿಎಂಸಿ ಮಾರುಕಟ್ಟೆಯಲ್ಲಿ ಜನಸಂದಣಿಯಿಂದ ಸಾಮಾಜಿಕ ಅಂತರ ಸಾಧಿಸಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ದಾಸನಪುರ ಮಾರುಕಟ್ಟೆಗೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗುತ್ತಿದೆ. ಸೋಮವಾರದಿಂದ ಯಶವಂತಪುರ ಮಾರುಕಟ್ಟೆ ಪ್ರಾಂಗಣದಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ವಹಿವಾಟು ನಿಷೇಧಿಸಲಾಗಿದೆ' ಎಂದು ಎಪಿಎಂಸಿ ನಿರ್ದೇಶಕ ಕರಿಗೌಡ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.