ADVERTISEMENT

ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ: ಸೋಮವಾರ ತಜ್ಞರ ವರದಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 21:38 IST
Last Updated 3 ಜುಲೈ 2020, 21:38 IST
   

ಬೆಂಗಳೂರು: 'ಆನ್‌ಲೈನ್ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ತಜ್ಞರ ಸಮಿತಿಯು ಸಮಾಲೋಚನೆ ಪೂರ್ಣಗೊಳಿಸಿದ್ದು, ಇದೇ 6ರಂದು ವರದಿ ಸಲ್ಲಿಸಲಿದೆ' ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣ ನಿಷೇಧಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಪೋಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, 'ತಜ್ಞರ ಸಮಿತಿಯ ವರದಿ ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT