ADVERTISEMENT

ವಕೀಲರನ್ನು ಒದಗಿಸುವುದಾಗಿ ನಂಬಿಸಿ ಆನ್‌ಲೈನ್‌ ವಂಚನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 19:55 IST
Last Updated 19 ಜೂನ್ 2021, 19:55 IST

ಬೆಂಗಳೂರು: ‘ಮೊಕದ್ದಮೆಯೊಂದರಲ್ಲಿ ವಾದ ಮಂಡಿಸಲು ವಕೀಲರನ್ನು ಒದಗಿಸುವುದಾಗಿ ಹೇಳಿದ್ದ ವ್ಯಕ್ತಿಯೊಬ್ಬರು ಆನ್‌ಲೈನ್‌ ಮೂಲಕ ₹ 23,600 ಪಡೆದು ವಂಚಿಸಿದ್ದಾರೆ’ ಎಂದು ಆರೋಪಿಸಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

‘ವಕೀಲರಾಗಿ ಹುಡುಕಾಟ ನಡೆಸುತ್ತಿದ್ದೆ. ಮೈಅಡ್ವೊ ಡಾಟ್ ಇನ್ ಜಾಲತಾಣದ ಮೂಲಕ ಆರೋಪಿಯ ನಂಬರ್ ಪಡೆದು ಕರೆ ಮಾಡಿದ್ದೆ. ಮೊಕದ್ದಮೆಯಲ್ಲಿ ವಾದಿಸಲು ವಕೀಲರನ್ನು ಒದಗಿಸುವುದಾಗಿ ಹಾಗೂ ದಾಖಲೆಗಳನ್ನು ಸಿದ್ಧಪಡಿಸುವುದಾಗಿ ಹೇಳಿದ್ದ ಆರೋಪಿ, ಬ್ಯಾಂಕ್‌ ಖಾತೆ ಮೂಲಕ ಹಣ ಪಡೆದಿದ್ದ. ಅದಾದ ನಂತರ ನಾಪತ್ತೆಯಾಗಿದ್ದಾನೆ’ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.