ADVERTISEMENT

ಆನ್‌ಲೈನ್ ಜೂಜು: ಸಚಿವ ಸಂಪುಟಕ್ಕೆ ಮಸೂದೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 19:31 IST
Last Updated 8 ಜುಲೈ 2021, 19:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಆನ್‌ಲೈನ್ ಜೂಜಿಗೆ ಸಂಬಂಧಿಸಿದಂತೆ ಮಸೂದೆ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಇರಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಫಿಡವಿಟ್ ಸಲ್ಲಿಸಿದರು. ಸಂಪುಟದ ಮುಂದೆ ಮಸೂದೆ ಮಂಡಿಸಲು ಎಲ್ಲಾ ಸಿದ್ಧತೆಗಳನ್ನು ಗೃಹ ಇಲಾಖೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಮತ್ತು ಶಾಸನಸಭೆಯ ಅನುಮೋದನೆ ಪಡೆದ ಬಳಿಕ ಸರ್ಕಾರದ ನಿಲುವನ್ನು ನ್ಯಾಯಾಯಲಯದ ಮುಂದೆ ಮಂಡಿಸಲಾಗುವುದು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಸಚಿವ ಸಂಪುಟ ನಿರ್ಧಾರಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಜುಲೈ 25ರೊಳಗೆ ಸಲ್ಲಿಸಬೇಕು ಎಂದು ಪೀಠ ತಿಳಿಸಿದೆ.

ADVERTISEMENT

ನಿಯಮಾವಳಿ ರೂಪಿಸುವ ತನಕ ಆನ್‌ಲೈನ್ ಜೂಜು ನಿಷೇಧಿಸಬೇಕು ಎಂದು ಕೋರಿ ದಾವಣಗೆರೆ ನಿವಾಸಿ ಡಿ.ಆರ್. ಶಾರದಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.