ADVERTISEMENT

ಬಿಪಿಎಲ್‌ ಕಾರ್ಡ್‌ ಇದ್ದವರಿಗೆ ಒಪಿಡಿ ಚಿಕಿತ್ಸೆ ಉಚಿತ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 20:28 IST
Last Updated 11 ಅಕ್ಟೋಬರ್ 2019, 20:28 IST
   

ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬಿಪಿಎಲ್‌ ಕಾರ್ಡ್‌ದಾರರಿಗೆ ಹೊರರೋಗಿ ವಿಭಾಗದ (ಒ‍ಪಿಡಿ) ಚಿಕಿತ್ಸೆ ಮತ್ತು ಇತರ ವೈದ್ಯಕೀಯತಪಾಸಣೆಗಳು ಇ‌ನ್ನು ಮುಂದೆ ಉಚಿತವಾಗಿ ಸಿಗಲಿವೆ.

ಇದುವರೆಗೆ ಬಿಪಿಎಲ್‌ ಕಾರ್ಡ್‌ದಾರರಿಗೆ ಒಪಿಡಿ ಹಾಗೂ ಎಕ್ಸ್‌ರೇ, ಸ್ಕ್ಯಾನಿಂಗ್‌ನಂತಹ ತಪಾಸಣೆಗಳಿಗೆ ಶೇ 50ರಷ್ಟು ಶುಲ್ಕ ವಿಧಿಸಲಾಗುತ್ತಿತ್ತು.

ಇಲಾಖೆಯ ಪರಿಶೀಲನಾ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ. ಎನ್‌. ಅಶ್ವತ್ಥನಾರಾಯಣ ಅವರು ಈ ಸೂಚನೆ ನೀಡಿದರು.

ADVERTISEMENT

ಅದರಂತೆ ಇಲಾಖೆಯ ಅಧಿಕಾರಿಗಳು ಬಿಪಿಎಲ್‌ ಕಾರ್ಡ್‌ದಾರಿಗೆ ಉಚಿತ ಚಿಕಿತ್ಸೆ ನೀಡುವ ಕುರಿತು ಹೊಸದಾಗಿ ಸುತ್ತೋಲೆ ಹೊರಡಿಸಿದರು.

ಒಳರೋಗಿಯಾಗಿ ಸೇರುವ ರೋಗಿಯ ಬಳಿ ಬಿಪಿಎಲ್‌ ಕಾರ್ಡ್‌ ಮತ್ತು ಆಧಾರ್‌ ಎರಡೂ ಇದ್ದರೆ, ಆರೋಗ್ಯ ಕರ್ನಾಟಕ ಆಯುಷ್ಮಾನ್‌ ಭಾರತ್‌ ಯೋಜನೆಯ ಅಡಿಯಲ್ಲಿ ಶೇ 94ರಷ್ಟು ವೈದ್ಯಕೀಯ ವೆಚ್ಚ ಮನ್ನಾವಾಗು ತ್ತದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.